ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಪರಿಸರವಾದಿ ಸಾಲುಮರದ ತಿಮ್ಮಕ್ಕನವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಡಿಎ ನಿವೇಶನ ಹಂಚಿಕೆ ಮಾಡಿದ್ದಾರೆ.
ನಿವೇಶನಕ್ಕಾಗಿ ಕೆಲ ದಿನಗಳ ಹಿಂದಷ್ಟೇ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದ ಸಾಲುಮರದ ತಿಮ್ಮಕ್ಕ ಅವರಿಗೆ ಬಿಡಿಎ ನಿವೇಶನ ಹಂಚಿಕೆ ಮಾಡುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಬಿಡಿಎ ಅಧಿಕಾರಿಗಳಿಗೆ ಸೂಚಿಸಿದ್ದರು. ಕ್ರಯಪತ್ರವನ್ನು ಸಿದ್ಧಪಡಿಸುವಂತೆಯೂ ತಿಳಿಸಿದ್ದರು.
ಇಂದು ಸಿಎಂ ಬೊಮ್ಮಾಯಿ ಅವರ ರೇಸ್ ಕೋರ್ಸ್ ರಸ್ತೆಯಲ್ಲಿನ ನಿವಾಸದಲ್ಲಿ ಸಾಲುಮರದ ತಿಮ್ಮಕ್ಕನವರಿಗೆ ಬಿಡಿಎ ನಿವೇಶನ ಕ್ರಯ ಪತ್ರವನ್ನು ಹಸ್ತಾಂತರಿಸಿದರು.
ಈ ಮೂಲಕ ನಾಡಪ್ರಭು ಕೆಂಪೇಗೌಡ ಬಡಾವಣೆಯ 7 ನೇ ಬ್ಲಾಕ್ ಜೆ ಸೆಕ್ಟರ್ ನಲ್ಲಿ ಒಟ್ಟು 50#80 ಚದರ ಅಡಿಯ ಬಿಡಿಎ ನಿವೇಶನವನ್ನು ಸಾಲುಮರದ ತಿಮ್ಮಕ್ಕನಿಗೆ ನೀಡಲಾಗಿದೆ.