ಬೆಂಗಳೂರು: ಪ್ರಸಕ್ತ ಸಾಲಿನ ಕೆಂಪೆಗೌಡ ಅಂತರಾಷ್ಟ್ರೀಯ ಪ್ರಶಸ್ತಿ ಪ್ರಕಟವಾಗಿದ್ದು, ಮೂರು ಜನ ಹಿರಿಯ ಸಾಧಕರಿಗೆ ಈ ಬಾರಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ.
ನಾಡ ಪ್ರಭು ಕೆಂಪೇಗೌಡರ ಗೌರವಾರ್ಥ ನೀಡಲಾಗುವ ಕೆಂಪೇಗೌಡ ಅಂತರಾಷ್ಟ್ರೀಯ ಪ್ರಶಸ್ತಿಯನ್ನು ಹಿರಿಯ ರಾಜಕಾರಣಿ ಎಸ್.ಎಂ. ಕೃಷ್ಣ, ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಮತ್ತು ಖ್ಯಾತ ಬ್ಯಾಡ್ಮಿಂಟನ್ ಆಟಗಾರ ಪ್ರಕಾಶ್ ಪಡುಕೋಣೆ ಅವರನ್ನು ಆಯ್ಕೆ ಮಾಡಲಾಗಿದೆ.
BIG NEWS: ಕ್ಲೈಮ್ಯಾಕ್ಸ್ ಹಂತ ತಲುಪಿದ ಮಹಾರಾಷ್ಟ್ರ ‘ರಾಜಕೀಯ’; ಬಂಡಾಯ ಶಾಸಕರ ಅನರ್ಹತೆಗೆ ಸಿದ್ಧತೆ
ಈ ಕುರಿತು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದು, ಜೂನ್ 27ರಂದು ವಿಧಾನಸೌಧದಲ್ಲಿ ನಡೆಯಲಿರುವ ಕೆಂಪೇಗೌಡರ 513ನೆ ಜಯಂತಿ ಕಾರ್ಯಕ್ರಮದಲ್ಲಿ ಮೂವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಪ್ರಶಸ್ತಿಯು ತಲಾ 5 ಲಕ್ಷ ರೂಪಾಯಿ ನಗದು ಬಹುಮಾನ ಒಳಗೊಂಡಿರುತ್ತದೆ ಎಂದು ತಿಳಿಸಿದ್ದಾರೆ.