ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಮುಂದಿನ 5 ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ.
ಜೂ. 26 ರಿಂದ 30ರವರೆಗೆ ಕರಾವಳಿಯ ಉಡುಪಿ, ಉತ್ತರಕನ್ನಡ, ದಕ್ಷಿಣಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಹವಾಮಾನ ಇಲಾಖೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದೆ. ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಡಳಿತದಿಂದ ಕಟ್ಟೆಚ್ಚರ ನೀಡಲಾಗಿದೆ.
ಜೂನ್ 26, 27 ಮತ್ತು 30ರಂದು ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಕಲಬುರ್ಗಿ, ಹಾವೇರಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವೇಗದ ಗಾಳಿ ಬೀಸುತ್ತಿರುವ ಕಾರಣ ಮತ್ತು ಕಡಲತೀರದಲ್ಲಿ ಸಮುದ್ರದ ಅಲೆಗಳ ಅಬ್ಬರ ಜೋರಾಗಿರುವುದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.