ಗುವಾಹಟಿಯಲ್ಲಿ ಇನ್ನೆಷ್ಟು ದಿನ ಅಡಗಿ ಕುಳಿತುಕೊಳ್ಳುವಿರಿ; ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಪ್ರಶ್ನೆ 26-06-2022 11:49AM IST / No Comments / Posted In: Latest News, India, Live News ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಮತ್ತೊಂದು ತಿರುವನ್ನು ಪಡೆದುಕೊಂಡಿದ್ದು, ಕೊರೋನಾ ಸೋಂಕಿನ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಡಿಸ್ಚಾರ್ಜ್ ಆದ ಬೆನ್ನಲ್ಲೇ 40ಕ್ಕೂ ಅಧಿಕ ಬಂಡಾಯ ಶಾಸಕರೊಂದಿಗೆ ಗುವಾಹಟಿಯ ಪಂಚತಾರಾ ಹೋಟೆಲ್ ರಾಡಿಸನ್ ಬ್ಲೂ ನಲ್ಲಿ ಬೀಡುಬಿಟ್ಟಿರುವ ಏಕನಾಥ್ ಶಿಂಧೆ ಇಂದು ಮಧ್ಯಾಹ್ನ ಸಭೆ ಕರೆದಿದ್ದಾರೆ. ಇದರ ಮಧ್ಯೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಆಪ್ತ ಸಂಜಯ್ ರಾವತ್ ಇನ್ನೆಷ್ಟು ದಿನ ಗುವಾಹಟಿಯಲ್ಲಿ ಅಡಗಿ ಕುಳಿತುಕೊಳ್ಳುವಿರಿ ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ಉದ್ಧವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ, ಪ್ರತಿಯೊಬ್ಬ ಶಾಸಕರುಗಳಿಗೆ ದಿನವೊಂದಕ್ಕೆ 9 ಲಕ್ಷ ರೂಪಾಯಿಗಳನ್ನು ಖರ್ಚು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿಯಿಂದಾಗಿ ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಜೊತೆಗೆ ಲಕ್ಷಾಂತರ ಮಂದಿ ನಿರ್ವಸತಿಗರಾಗಿದ್ದು, ಇವರುಗಳ ಯೋಗಕ್ಷೇಮ ನೋಡಿಕೊಳ್ಳಬೇಕಾದ ಅಸ್ಸಾಂ ಸರ್ಕಾರ, ಮಹಾರಾಷ್ಟ್ರ ಸರ್ಕಾರವನ್ನು ಉರುಳಿಸಲು ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತಿದೆ ಎಂದು ಆದಿತ್ಯ ಠಾಕ್ರೆ ಹೇಳಿದ್ದಾರೆ. कब तक छीपोगे गोहातीमे..आना हि पडेगा.. चौपाटीमे.. pic.twitter.com/tu4HcBySSO — Sanjay Raut (@rautsanjay61) June 26, 2022