ಕೊಪ್ಪಳ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜೂ. 28ರಂದು ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 3 ಗಂಟೆಯವರೆಗೆ ಜಿಲ್ಲಾಡಳಿತ ಭವನದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಾಕ್-ಇನ್-ಇಂಟರ್ವ್ಯೂವ್ ಆಯೋಜಿಸಲಾಗಿದೆ.
ವಾಕ್-ಇನ್-ಇಂಟರ್ವ್ಯೂವ್ನಲ್ಲಿ ಹೊಸಪೇಟೆಯ ಚೈತನ್ಯಾ ಇಂಡಿಯಾ ಫೀನ್ ಕ್ರೆಡಿಟ್ ಪ್ರೈ.ಲಿ ಕಂಪನಿಯು ಭಾಗವಹಿಸುತ್ತಿದ್ದು, ಇಂಟರ್ವ್ಯೂವ್ನಲ್ಲಿ ಭಾಗವಹಿಸಲು ಇಚ್ಛಿಸುವ 18-29 ವರ್ಷದ ಒಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು 2 ಬಯೋಡಾಟಾ, ಪ್ರಮಾಣ ಪತ್ರಗಳು, ಆಧಾರ್ ಕಾರ್ಡ್, ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಹಾಜರಾಗಬೇಕು.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಅಥವಾ ಯಾವುದೇ ಪದವೀಧರರು ಭಾಗವಹಿಸಬಹುದು. ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ ಹಾಗೂ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 08539-220859, 9742922949, 9606921057 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.