2023 ರ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಸಂಪೂರ್ಣ ಬಹುಮತ ಸಿಗಲಿದ್ದು, ಮತ್ತೆ ನಾನೇ ರಾಜ್ಯದ ಮುಖ್ಯಮಂತ್ರಿಯಾಗುತ್ತೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ
ಭಾನುವಾರದಂದು ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ದೈವ ಅನುಗ್ರಹವಿದೆ. ಹೀಗಾಗಿ ರಾಜ್ಯದ ನೊಂದ ಜನರನ್ನು ರಕ್ಷಿಸುವ ಸಲುವಾಗಿ ಮತ್ತೆ ನಾನೇ ಮುಖ್ಯಮಂತ್ರಿಯಾಗುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
BIG SHOCKING: ಲಿಫ್ಟ್ ನೆಪದಲ್ಲಿ ಚಲಿಸುತ್ತಿದ್ದ ಕಾರ್ ನಲ್ಲಿ ಮಹಿಳೆ, 6 ವರ್ಷದ ಮಗಳ ಮೇಲೆ ಗ್ಯಾಂಗ್ ರೇಪ್
2023ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಸಲುವಾಗಿಯೇ ಆಗಸ್ಟ್ ನಿಂದ ʼಪಂಚರತ್ನʼ ರಥಯಾತ್ರೆ ಆರಂಭಿಸುವುದಾಗಿ ತಿಳಿಸಿದ ಕುಮಾರಸ್ವಾಮಿಯವರು, ರಾಜ್ಯದ ಜನತೆ ನಮ್ಮನ್ನು ಆಶೀರ್ವದಿಸುವ ಭರವಸೆ ಇದೆ ಎಂದು ಹೇಳಿದರು.