ಮಹಾರಾಷ್ಟ್ರದ ಬಂಡಾಯ ಶಾಸಕರ ಅನರ್ಹತೆ ಕೋರಿ ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಹೀಗಾಗಿ ಈ ಶಾಸಕರುಗಳಿಗೆ ಡೆಪ್ಯೂಟಿ ಸ್ಪೀಕರ್ ನೋಟೀಸ್ ನೀಡಿದ್ದರು.
ಇದನ್ನು ಪ್ರಶ್ನಿಸಿ ಏಕನಾಥ್ ಶಿಂಧೆ ಮತ್ತಿತರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇದೀಗ ಸುಪ್ರೀಂ ಅನರ್ಹತೆ ಕ್ರಮ ಕೈಗೊಳ್ಳದಂತೆ ತಡೆ ನೀಡಿ ವಿಚಾರಣೆಯನ್ನು ಜುಲೈ 11 ಕ್ಕೆ ಮುಂದೂಡಿದೆ.
ಹೀಗಾಗಿ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಬಣಕ್ಕೆ ತೀವ್ರ ಹಿನ್ನಡೆಯಾಗಿದ್ದು, ಅವರಿಗೆ ರಾಜೀನಾಮೆ ನೀಡದೆ ಬೇರೆ ದಾರಿಯೇ ಇಲ್ಲದಂತಾಗಿದೆ.