ಮುಂಬೈ: ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆ ಬಣದಲ್ಲಿ ಗುರುತಿಸಿಕೊಂಡ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಗೊಂಡಿಯಾ ಕ್ಷೇತ್ರದ ಪಕ್ಷೇತರ ಶಾಸಕರ ಕಚೇರಿಯನ್ನು ಶಿವಸೇನೆ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ.
ಪಕ್ಷೇತರ ಶಾಸಕ ವಿನೋದ್ ಅಗರವಾಲ್ ಅವರ ಕಚೇರಿ ಮೇಲೆ ದಾಳಿ ಮಾಡಿದ ಶಿವಸೇನೆ ಕಾರ್ಯಕರ್ತರು ಕಚೇರಿ ಧ್ವಂಸಗೊಳಿಸಿದ್ದಾರೆ. ಪೊಲೀಸರ ಭದ್ರತೆಯ ನಡುವೆಯೂ ಶಿವಸೇನೆ ಕಾರ್ಯಕರ್ತರು ಕಚೇರಿ ಧ್ವಂಸಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ.