ಕೊಪ್ಪಳ: ಜೆಡಿಎಸ್ ಪಕ್ಷದ ಕೆಲವು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ಕೊಪ್ಪಳ ತಾಲೂಕಿನ ಬಸಾಪುರ ಗ್ರಾಮದ ಸಮೀಪ ವಿಮಾನ ತಂಗುದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷದ ಕೆಲವು ಶಾಸಕರು ಸಂಪರ್ಕದಲ್ಲಿದ್ದು, ಅವರು ಯಾರು ಎನ್ನುವುದನ್ನು ಈಗಲೇ ಹೇಳುವುದಿಲ್ಲ ಎಂದು ತಿಳಿಸಿದ್ದಾರೆ.
ಜೆಡಿಎಸ್ ರಾಷ್ಟ್ರೀಯ ಪಕ್ಷವಲ್ಲ, ಸ್ವಂತವಾಗಿ ಅಧಿಕಾರಕ್ಕೇರುವ ಸಾಮರ್ಥ್ಯ ಹೊಂದಿಲ್ಲ. ಆ ಪಕ್ಷದ ಕೆಲವು ಶಾಸಕರು ಸಂಪರ್ಕದಲ್ಲಿದ್ದು ಅವರು ಯಾರು, ಎಷ್ಟು ಶಾಸಕರು ಎನ್ನುವುದನ್ನು ಮಾತ್ರ ಹೇಳುವುದಿಲ್ಲ ಎಂದರು. ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವ ಕುರಿತು ಹೇಳಿಕೆ ನೀಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಮುಖ್ಯಮಂತ್ರಿ ಆಗುತ್ತೇನೆ ಎಂದು ನೀವೂ ಹೇಳಬಹುದು, ಅದು ಜನರ ತೀರ್ಮಾನವಾಗುತ್ತದೆ ಹೇಳಿದ್ದಾರೆ.