ನವದೆಹಲಿ: ಪ್ಲಾಸ್ಟಿಕ್ ಕಡ್ಡಿಯ ಹಿಯರ್ ಬಡ್ಸ್, ಪ್ಲಾಸ್ಟಿಕ್ ಕಡ್ಡಿಯ ಬಲೂನ್, ಪ್ಲಾಸ್ಟಿಕ್ ಧ್ವಜ, ಥರ್ಮಕೋಲ್, ಪ್ಲಾಸ್ಟಿಕ್ ತಟ್ಟೆ, ಲೋಟ, ಚಮಚ ಸೇರಿದಂತೆ ಏಕ ಬಳಕೆಯ ಪ್ಲಾಸ್ಟಿಕ್ ಜುಲೈ 1 ರಿಂದ ಸಂಪೂರ್ಣ ನಿಷೇಧಿಸಲಾಗಿದೆ.
ಪರಿಸರಕ್ಕೆ ಹಾನಿ ಮಾಡುತ್ತಿರುವ ಪ್ಲಾಸ್ಟಿಕ್ ಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಏಕ ಬಳಕೆಯ ಪ್ಲಾಸ್ಟಿಕ್ ಉತ್ಪಾದನೆ, ಆಮದು, ದಾಸ್ತಾನು, ವಿತರಣೆ, ಮಾರಾಟ ಮತ್ತು ಬಳಕೆ ನಿಷೇಧಿಸಲಾಗಿದೆ. ಆದೇಶ ಕಟ್ಟುನಿಟ್ಟಿನ ಜಾರಿಗೆ ಕಂಟ್ರೋಲ್ ರೂಮ್ ಸ್ಥಾಪನೆ, ವಿಶೇಷ ತಂಡಗಳು ಸಿದ್ದಪಡಿಸಲಾಗಿದೆ.
ಕೇಂದ್ರ ಸರ್ಕಾರ ಸರ್ವ ರೀತಿಯಲ್ಲಿಯೂ ಸಜ್ಜಾಗಿದ್ದು, ಏಕಬಳಕೆ ಪ್ಲಾಸ್ಟಿಕ್ ನಿಷೇಧಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಪ್ಲಾಸ್ಟಿಕ್ ನಿಷೇಧ ನಿಯಮ ಉಲ್ಲಂಘನೆ ಬಗ್ಗೆ ದೂರು ನೀಡಲು ಆಪ್ ಬಿಡುಗಡೆಮಾಡಲಾಗಿದೆ. ನಿಯಮ ಉಲ್ಲಂಘಿಸಿದರೆ ಐದು ವರ್ಷದವರೆಗೆ ಜೈಲು ಶಿಕ್ಷೆ ಅಥವಾ ಒಂದು ಲಕ್ಷ ರೂಪಾಯಿ ದಂಡ ಅಥವಾ ಎರಡನ್ನು ವಿಧಿಸಲು ಅವಕಾಶವಿದೆ.