ಬೆಂಗಳೂರು: ಹಣಕಾಸು ಇಲಾಖೆ 5300 ಪೌರ ಕಾರ್ಮಿಕರ ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಿದ್ದು, ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಸೂಚನೆ ನೀಡಿದ್ದಾರೆ.
ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನೇರಪಾವತಿ ವೇತನ ಪಡೆಯುತ್ತಿರುವ ಪೌರಕಾರ್ಮಿಕರ ಸೇವೆಯನ್ನು ಮೂರು ವರ್ಷಗಳಲ್ಲಿ ಹಂತಹಂತವಾಗಿ ಕಾಯಂಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಆರೋಗ್ಯ ವಿಮೆ ಸೌಲಭ್ಯವನ್ನು ಎಲ್ಲಾ ಪೌರಕಾರ್ಮಿಕರು ಮತ್ತು ಸ್ವಚ್ಛತಾ ಕಾರ್ಮಿಕರಿಗೆ ವಿಸ್ತರಿಸಲು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.