alex Certify BIG NEWS: ವಿದ್ಯುತ್ ದರ ಹೆಚ್ಚಳ; ಸ್ಪಷ್ಟನೆ ನೀಡಿದ ಇಂಧನ ಸಚಿವ ಸುನೀಲ್ ಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿದ್ಯುತ್ ದರ ಹೆಚ್ಚಳ; ಸ್ಪಷ್ಟನೆ ನೀಡಿದ ಇಂಧನ ಸಚಿವ ಸುನೀಲ್ ಕುಮಾರ್

ಬೆಂಗಳೂರು; ವಿದ್ಯುತ್ ದರ ಏರಿಕೆ ವಿಚಾರವಾಗಿ ಸ್ಪಷ್ಟನೆ ನೀಡಿರುವ ಇಂಧನ ಸಚಿವ ಸುನೀಲ್ ಕುಮಾರ್, ವಿದ್ಯುತ್ ದರ ಹೆಚ್ಚಳ ಮಾಡುವುದು ರಾಜ್ಯ ಸರ್ಕಾರವಲ್ಲ. ಕೆ ಇ ಆರ್ ಸಿ ನಿರ್ಧಾರ ಎಂದು ತಿಳಿಸಿದ್ದಾರೆ.

ಜುಲೈ 1ರಿಂದ 6 ತಿಂಗಳವರೆಗೆ ಎಸ್ಕಾಂ ಗಳು ಪ್ರತಿ ಯೂನಿಟ್ ಗೆ 19ರಿಂದ 31 ಪೈಸೆವರೆಗೆ ಹೆಚ್ಚುವರಿ ದರವನ್ನು ಇಂಧನ ಹೊಂದಾಣಿಕೆ ವೆಚ್ಚ ರೂಪದಲ್ಲಿ ಸಂಗ್ರಹ ಮಾಡಲು ಅವಕಾಶ ಕಲ್ಪಿಸಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ-ಕೆ ಇ ಆರ್ ಸಿ ಆದೇಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಸಚಿವ ಸುನೀಲ್ ಕುಮಾರ್, ವಿದ್ಯುತ್ ದರ ಹೆಚ್ಚಳ ಮಾಡುವುದು ರಾಜ್ಯ ಸರ್ಕಾರವಲ್ಲ, ಕೆ ಇ ಆರ್ ಸಿ. ಸಿದ್ದರಾಮಯ್ಯ ಸರ್ಕಾರದಲ್ಲಿ 2013-14ರಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ ಅಂದಿನಿಂದ ಇಂದಿನವರೆಗೂ ಮೂರು ತಿಂಗಳಿಗೊಮ್ಮೆ ದರ ಪರಿಷ್ಕರಣೆ ಮಾಡಲಾಗುತ್ತಿದೆ. ಇಲ್ಲಿ ಸರ್ಕಾರದಿಂದ ಯಾವುದೇ ದರ ಹೆಚ್ಚಳ ಮಾಡಿಲ್ಲ. ಕೆ ಇ ಆರ್ ಸಿ ನಿಂದ ದರ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...