50 ಕ್ಕೂ ಅಧಿಕ ಶಾಸಕರ ಬಂಡಾಯದ ಕಾರಣಕ್ಕೆ ತಮ್ಮ ಸರ್ಕಾರ ಬಹುಮತ ಕಳೆದುಕೊಂಡಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಉದ್ದವ್ ಠಾಕ್ರೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ನಾಳೆ ಸದನದಲ್ಲಿ ಬಹುಮತ ಸಾಬೀತುಪಡಿಸುವಂತೆ ಸೂಚಿಸಿರುವ ಬೆನ್ನಲ್ಲೇ ಉದ್ದವ್ ಠಾಕ್ರೆ ಈ ಮಹತ್ವದ ಘೋಷಣೆ ಮಾಡಿದ್ದಾರೆ.
ರಾಜ್ಯಪಾಲರ ಆದೇಶ ಪ್ರಶ್ನಿಸಿ ಉದ್ದವ್ ಠಾಕ್ರೆ ಸರ್ಕಾರ, ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತಾದರೂ ಯಾವುದೇ ಪ್ರಯೋಜನವಾಗಿರಲಿಲ್ಲ.
ಬಹುಮತ ಸಾಬೀತುಪಡಿಸುವುದು ಸದನದಲ್ಲೇ ಎಂದು ಹೇಳಿದ್ದ ಸುಪ್ರೀಂ ಕೋರ್ಟ್ ರಾಜ್ಯಪಾಲರ ಆದೇಶಕ್ಕೆ ತಡೆ ನೀಡಲು ನಿರಾಕರಿಸಿತ್ತು.
ಹೀಗಾಗಿ ತಮ್ಮ ಸರ್ಕಾರ ಪತನಗೊಳ್ಳುವುದು ಬಹುತೇಕ ಖಚಿತ ಎಂಬುದನ್ನು ಮನಗಂಡ ಉದ್ದವ್ ಠಾಕ್ರೆ ಈ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.