ಬೆಂಗಳೂರು: ರಾಜ್ಯಾದ್ಯಂತ ನಾಳೆ ಜುಲೈ 1ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಂಗಳೂರಿನಲ್ಲಿ ಈಗಾಗಲೇ ನಿರಂತರ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ ನಾಳೆಯಿಂದ ಮತ್ತೆ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ.
ಆರಿದ್ರಾ ಮಳೆಯ ಅಬ್ಬರಕ್ಕೆ ಕೊಡಗು, ಚಿಕ್ಕಮಗಳೂರು, ಕರಾವಳಿ ಜಿಲ್ಲೆಗಳು ತತ್ತರಿಸಿದ್ದು, ಹಲವೆಡೆ ತಗ್ಗು ಪ್ರದೇಶಗಳು, ಕೃಷಿ ಭೂಮಿ ಜಲಾವೃತಗೊಂಡಿವೆ. ಮುಂದಿನ 24 ಗಂಟೆಯಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗಲಿದೆ.