ಬೆಂಗಳೂರು: ಉದಯಪುರದಲ್ಲಿ ವ್ಯಕ್ತಿಯ ಶಿರಚ್ಛೇದ ಪ್ರಕರಣ ಅಮಾನವೀಯ ಹಾಗೂ ಹೇಯ ಕೃತ್ಯ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಆರ್.ಟಿ.ನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನೂಪುರ್ ಶರ್ಮಾಗೆ ಬೆಂಬಲಿಸಿ ಪೋಸ್ಟ್ ಹಾಕಿದ್ದಕ್ಕೆ ಉದಯಪುರದಲ್ಲಿ ಟೈಲರ್ ಶಿರಚ್ಛೇದ ಮಾಡಿದ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಅತ್ಯಂತ ಅಮಾನವೀಯ ಕೃತ್ಯ ಇದಾಗಿದೆ. ಭಯೋತ್ಪಾದಕ ಚಟುವಟಿಕೆಯ ಕೈವಾಡ ಇದರಲ್ಲಿ ಅಡಗಿದೆ ಈ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ಎಂದರು.
ಈ ಕೃತ್ಯದ ಹಿಂದೆ ಅಂತರಾಷ್ಟ್ರೀಯ ಷಡ್ಯಂತ್ರ ಇದೆ. ಕೊಲೆಗೆಡುಕರನ್ನು ಗಲ್ಲಿಗೇರಿಸಬೇಕು. ಈ ನಿಟ್ಟಿನಲ್ಲಿ ರಾಜಸ್ಥಾನ ಸರ್ಕಾರ ಕ್ರಮಕೈಗೊಳ್ಳಬೇಕು. ಆರೋಪಿಗಳು ಮಾತ್ರವಲ್ಲ ಅವರ ಹಿಂದಿನ ವಿದೇಶಿ ಸಂಸ್ಥೆಗಳ ಬಗ್ಗೆಯೂ ಸಂಪೂರ್ಣ ತನಿಖೆಯಾಗಬೇಕು ಎಂದು ಹೇಳಿದರು.