ಪ್ರಕರಣವೊಂದರ ವಿಚಾರಣೆ ವೇಳೆ ಆರೋಪಿಗಳಿಗೆ ಕೈಕೋಳ ತೊಡಿಸುವ ಕುರಿತಂತೆ ಹೈಕೋರ್ಟ್ ಧಾರವಾಡ ಪೀಠ ಮಹತ್ವದ ಆದೇಶ ನೀಡಿದೆ. ಅನಗತ್ಯವಾಗಿ ಆರೋಪಿಗೆ ಕೈ ಕೋಳ ತೊಡಿಸುವಂತಿಲ್ಲ ಎಂದು ಸ್ಪಷ್ಟ ಸೂಚನೆ ನೀಡಿದೆ.
ಆರೋಪಿಯೊಬ್ಬನಿಗೆ ಕೈಕೋಳ ತೊಡಿಸಿ ಮೆರವಣಿಗೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಆತ ನ್ಯಾಯಾಲಯದ ಮೆಟ್ಟಿಲೇರಿದ್ದು, ಇದೀಗ ಆತನಿಗೆ 2 ಲಕ್ಷ ರೂಪಾಯಿಗಳ ಪರಿಹಾರ ನೀಡುವಂತೆ ನ್ಯಾಯಾಲಯದಿಂದ ಆದೇಶಿಸಲಾಗಿದೆ.
ಅಲ್ಲದೆ ಪೊಲೀಸರು ಆರೋಪಿಗಳ ಬಂಧನಕ್ಕೆ ಹೋದ ವೇಳೆ ಅವರಿಗೆ ಬಾಡಿ ಕ್ಯಾಮರಾ ಅಳವಡಿಸಿಕೊಳ್ಳಲು ಸೂಚನೆ ನೀಡುವಂತೆ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಅವರಿಗೆ ನ್ಯಾಯಾಲಯ ನಿರ್ದೇಶನ ನೀಡಿದ್ದು, ಈ ಮೂಲಕ ಬಂಧನ ಪ್ರಕ್ರಿಯೆ ದಾಖಲಾಗುತ್ತದೆ ಎಂದು ತಿಳಿಸಿದೆ. ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಹೈಕೋರ್ಟ್ ಧಾರವಾಡ ಪೀಠ ಈ ಮಹತ್ವದ ಆದೇಶ ನೀಡಿದೆ.