ಬೆಂಗಳೂರು: ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಅರುಣ್ ಚಕ್ರವರ್ತಿ ಅವರನ್ನು ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದ್ದು, ನಾಗರಿಕ ಹಕ್ಕು ಜಾರಿ ನಿರ್ದೇಶನಲಯದ ಎಡಿಜಿಪಿ ಹುದ್ದೆ ಹೊಣೆಗಾರಿಕೆ ನೀಡಲಾಗಿದೆ.
ಡಾ. ಕೆ. ತ್ಯಾಗರಾಜನ್ ಅವರಿಗೆ ದಾವಣಗೆರೆ ಪೂರ್ವ ವಲಯ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದೆ. ಅಂಶುಕುಮಾರ್ ಮಂಗಳೂರು ಕಾನೂನು-ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ವರ್ಗಾವಣೆಗೊಂಡಿದ್ದಾರೆ.