ಶಿವಸೇನೆ ಬಂಡಾಯ ನಾಯಕ ಏಕನಾಥ ಶಿಂಧೆಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟ ಬಿಜೆಪಿ ಮಹಾರಾಷ್ಟ್ರ ರಾಜಕೀಯದಲ್ಲಿ ಮತ್ತೊಂದು ಅಚ್ಚರಿ ನಿರ್ಧಾರ ಕೈಗೊಂಡಿದೆ.
ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಲಿದ್ದಾರೆ. ಬಿಜೆಪಿ ನಾಯಕರು ದೇವೇಂದ್ರ ಅವರು ಉಪಮುಖ್ಯಮಂತ್ರಿಯಾಗಬೇಕೆಂದು ಸಲಹೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಗೆ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ.
ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ದೇವೇಂದ್ರ ಫಡ್ನವೀಸ್ ಈಗ ಉಪಮುಖ್ಯಮಂತ್ರಿಯಾಗಲಿದ್ದಾರೆ. ರಿಮೋಟ್ ಕಂಟ್ರೋಲ್ ಆಗುವ ಬದಲು ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಉಪಮುಖ್ಯಮಂತ್ರಿ ಸ್ಥಾನ ವಹಿಸಿಕೊಳ್ಳುವಂತೆ ಬಿಜೆಪಿ ಹೈಕಮಾಂಡ್ ದೇವೇಂದ್ರ ಫಡ್ನವೀಸ್ ಅವರಿಗೆ ಸೂಚನೆ ನೀಡಿದೆ ಎಂದು ಹೇಳಲಾಗಿದೆ.
ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ ಅವರ ಕೋರಿಕೆಯ ಮೇರೆಗೆ ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರ ಸರ್ಕಾರಕ್ಕೆ ಸೇರಲು ನಿರ್ಧರಿಸಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.