ಬೆಂಗಳೂರು: ಡೀಸೆಲ್ ದರ ಹೆಚ್ಚಳ, ಆರ್ಥಿಕ ಸಂಕಷ್ಟದ ಹಿನ್ನೆಲೆಯಲ್ಲಿ ಬಸ್ ಪ್ರಯಾಣದರ ಹೆಚ್ಚಳ ಬಗ್ಗೆ ಚರ್ಚೆ ನಡೆಸಲಾಗಿದೆ. ಬಸ್ ಪ್ರಯಾಣ ದರ ಹೆಚ್ಚಳ ಸೇರಿದಂತೆ ಹಲವು ವಿಷಯಗಳು ಕುರಿತಾಗಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
ಬಂಕ್ ಗಳಿಂದ ಬಸ್ ಗಳಿಗೆ ಡೀಸೆಲ್ ತುಂಬಿಸಿಕೊಳ್ಳುವ ಗೊಂದಲದ ಕುರಿತಾಗಿ ಕೆಎಸ್ಆರ್ಟಿಸಿ ಸೇರಿದಂತೆ 4 ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಸಭೆ ನಡೆಸಿದ್ದು, ಸಭೆಯಲ್ಲಿ ಟಿಕೆಟ್ ದರ ಹೆಚ್ಚಳ ಬಗ್ಗೆ ಕೂಡ ಚರ್ಚೆ ನಡೆಸಿದ್ದಾರೆ.
ಎರಡು ತಿಂಗಳ ಹಿಂದೆ ಬಸ್ ಟಿಕೆಟ್ ದರವನ್ನು ಶೇಕಡ 30 ರಿಂದ 35 ರಷ್ಟು ಹೆಚ್ಚಳ ಮಾಡುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈಗ ಡೀಸೆಲ್ ದರ ಏರಿಕೆಯಾಗಿರುವುದರಿಂದ ಟಿಕೆಟ್ ದರ ಹೆಚ್ಚಳಕ್ಕೆ ಕೋರಲಾಗಿದೆ. ಹೆಚ್ಚುವರಿ ಅನುದಾನ ಅಥವಾ ದರ ಏರಿಕೆಗೆ ಅನುಮೋದನೆ ನೀಡುವ ಬಗ್ಗೆ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಹಣಕಾಸು ಇಲಾಖೆಗೆ ಬೇಡಿಕೆ ಮುಂದಿಟ್ಟಿದ್ದಾರೆ ಎನ್ನಲಾಗಿದೆ.