2019ರಲ್ಲಿ ಅಧಿಕಾರಕ್ಕೆ ಬಂದಿದ್ದ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಶಪಥ ಮಾಡಿತ್ತು ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಆರೋಪಿಸಿದ್ದಾರೆ. ಆದರೆ ನಮ್ಮ ಪಕ್ಷವು ಆ ಕೆಲಸವನ್ನು ಮಾಡುವುದಿಲ್ಲ. ಹೊಸ ಸರ್ಕಾರವು ಸಾರ್ವಜನಿಕ ಪರವಾಗಿದ್ದರೆ ನಮ್ಮಿಂದ ಯಾವುದೇ ತೊಂದರೆ ಇರುವುದಿಲ್ಲ ಎಂದು ಹೇಳಿದ್ದಾರೆ.
ಉದ್ಧವ್ ಠಾಕ್ರೆ ವಿರುದ್ಧ ಬಂಡಾಯದ ನೇತೃತ್ವ ವಹಿಸಿದ್ದ ಏಕನಾಥ್ ಶಿಂಧೆ ಮಹಾರಾಷ್ಟ್ರದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಮಾರನೇ ದಿನ ಸಂಜಯ್ ರಾವತ್ ಈ ಹೇಳಿಕೆಯನ್ನು ನೀಡಿದ್ದಾರೆ. ನಿನ್ನೆ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರ ಡಿಸಿಎಂ ಆಗಿ ಅಧಿಕಾರ ವಹಿಸಿದ್ದಾರೆ.
ಹೊಸ ಸರ್ಕಾರಕ್ಕೆ ನನ್ನ ಅಭಿನಂದನೆಗಳು. ಈ ಸರ್ಕಾರವನ್ನು ನಾವು ಸ್ವಾಗತಿಸುತ್ತೇವೆ. ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದ ಮೊದಲ ದಿನವೇ ಬಿಜೆಪಿಯವರು ಈ ಸರ್ಕಾರವನ್ನು ಉರುಳಿಸುವ ಮಾತುಗಳನ್ನಾಡಿದ್ದರು. ಆದರೆ ನಾವು ಆ ರೀತಿ ಮಾಡುವುದಿಲ್ಲ. ಈ ಸರ್ಕಾರವು ಸಾರ್ವಜನಿಕ ಪರವಾಗಿ ಕೆಲಸ ಮಾಡಿದರೆ ನಮ್ಮಿಂದ ಸರ್ಕಾರಕ್ಕೆ ಯಾವುದೇ ತೊಂದರೆ ಇರುವುದಿಲ್ಲ ಎಂದು ಹೇಳಿದ್ದಾರೆ.
ಶಿವಸೇನೆಯ 39 ಶಾಸಕರು ಠಾಕ್ರೆ ವಿರುದ್ಧ ಬಂಡಾಯವೆದ್ದು ಶಿಂಧೆ ಬಣಕ್ಕೆ ಸೇರಿದರೂ, ಸಂಘಟನೆಯ ದುರ್ಬಲತೆಯನ್ನು ರಾವತ್ ನಿರಾಕರಿಸಿದ್ದಾರೆ. ನಮ್ಮ ಸಂಘಟನೆಯು ದುರ್ಬಲವಾಗಿರಲಿಲ್ಲ. ನಮ್ಮಲ್ಲಿ ಯಾರಿಗೂ ಬೇಸರವಿರಲಿಲ್ಲ ಎಂದು ಹೇಳಿದ್ದಾರೆ.