ನವದೆಹಲಿ: ಮುಂದಿನ 30-40 ವರ್ಷಗಳು ಬಿಜೆಪಿಯ ಯುಗವಾಗಿದೆ. ಮುಂದಿನ ಕೆಲವೇ ದಿನಗಳಲ್ಲಿ ಭಾರತವು ‘ವಿಶ್ವ ಗುರು’ (ವಿಶ್ವ ನಾಯಕ) ಆಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ಹೈದರಾಬಾದ್‌ನಲ್ಲಿ ಭಾನುವಾರ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ದಶಕಗಳ ರಾಜಕೀಯ ಗಮನಿಸಿದಾಗ ಮುಂಬರುವ ಚುನಾವಣೆಯಲ್ಲಿ ಕೇಸರಿ ಪಕ್ಷವು ತೆಲಂಗಾಣ ಮತ್ತು ಪಶ್ಚಿಮ ಬಂಗಾಳದಲ್ಲಿ “ಕುಟುಂಬ ಆಡಳಿತ” ವನ್ನು ಕೊನೆಗೊಳಿಸಲಿದೆ ಎಂದು ಶಾ ಹೇಳಿದ್ದಾರೆ.
ಇತ್ತೀಚಿನ ಕೆಲವು ಚುನಾವಣೆಗಳಲ್ಲಿ ಬಿಜೆಪಿಯ ವಿಜಯಕ್ಕೆ “ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಯ ರಾಜಕೀಯ” ಕಾರಣ ಎಂದು ಉಲ್ಲೇಖಿಸಿದ ಶಾ, ರಾಜವಂಶ, ಜಾತಿವಾದ ಮತ್ತು ತುಷ್ಟೀಕರಣದ ರಾಜಕೀಯವನ್ನು ಕೊನೆಗೊಳಿಸಬೇಕೆಂದು ಕರೆ ನೀಡಿದರು.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಶಾ, ಅದು ಕುಟುಂಬದ ಪಕ್ಷವಾಗಿದೆ, ಗಾಂಧಿ ಕುಟುಂಬವು ತನ್ನ ನಿಯಂತ್ರಣವನ್ನು ಕಳೆದುಕೊಳ್ಳುವ ಭಯದಿಂದ ಆಂತರಿಕ ಸಾಂಸ್ಥಿಕ ಚುನಾವಣೆಗಳನ್ನು ನಡೆಸಲು ಬಿಡುತ್ತಿಲ್ಲ ಎಂದು ಹೇಳಿದರು.