ಪ್ರಧಾನಿ ಮೋದಿ ಆಂಧ್ರ ಪ್ರದೇಶ ಭೇಟಿ ಸಂದರ್ಭದಲ್ಲಿ ಭದ್ರತಾ ಲೋಪ ಆರೋಪ ಎದುರಾಗಿದೆ. ಭೀಮಾವರಂ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ ಸಂದರ್ಭದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತಾದರೂ ಸಹ ಗನ್ನವರಂನಿಂದ ಭೀಮಾರಂಗೆ ಪ್ರಧಾನಿ ಮೋದಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಭದ್ರತಾ ಲೋಪ ಎಸಗಲಾಗಿದೆ ಎಂದು ವರದಿಯಾಗಿದೆ.
ಪ್ರಧಾನಿ ಮೋದಿ ಭೇಟಿಯನ್ನು ಖಂಡಿಸಿ ಆಂಧ್ರ ಪ್ರದೇಶ ಕಾಂಗ್ರೆಸ್ ನಾಯಕರು ಮೋದಿ ಗೋ ಬ್ಯಾಕ್ ಎಂದು ಬರೆಯಲಾದ ಕಪ್ಪು ಬಣ್ಣದ ಬಲೂನ್ಗಳನ್ನು ಹಾರಿಸಿದ್ದಾರೆ. ಈ ಬಲೂನುಗಳು ಪ್ರಧಾನಿ ಮೋದಿ ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ನ ಸಮೀಪವೇ ಬಂದಿದೆ.
ಈ ಸಂಬಂಧ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೆಲಿಕಾಪ್ಟರ್ನಲ್ಲಿ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಹಾಗೂ ಕೇಂದ್ರ ಸಚಿವ ಕಿಶನ್ ರೆಡ್ಡಿ ಕೂಡ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಪ್ರಧಾನಿಗಳು ಪ್ರಯಾಣಿಸುವ ಸಂದರ್ಭದಲ್ಲಿ ಈ ರೀತಿ ಘಟನೆಗಳು ಸಂಭವಿಸಿವುದು ಅಪರಾಧ ಎಂದು ಪರಿಗಣಿಸಲಾಗುತ್ತದೆ. ಪ್ರಧಾನಿ ಮೋದಿ ಭೇಟಿಯು ಪೂರ್ವ ನಿಯೋಜಿತವಾಗಿದ್ದರೂ ಸಹ ಆಂಧ್ರ ಪ್ರದೇಶದ ಅಧಿಕಾರಿಗಳು ಭದ್ರತಾ ಲೋಪ ಉಂಟಾಗಲು ಕಾರಣರಾಗಿದ್ದಾರೆ ಎಂಬ ಆಕ್ರೋಶ ಎಲ್ಲೆಡೆ ಕೇಳಿ ಬಂದಿದೆ.