ಬೆಂಗಳೂರು: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ, ಐಸಿಪಿಎಸ್-ಸಮಗ್ರ ಮಕ್ಕಳ ರಕ್ಷಣಾ ಆಯೊಗ ನಿರ್ದೇಶಕ ಜೆ.ಮಂಜುನಾಥ್ ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಡಿಸಿ ಕಚೇರಿಯಲ್ಲಿಯೇ ಆಪ್ತನಿಂದ ಲಂಚ ಪಡೆದಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಎಸಿಬಿ ಅಧಿಕಾರಿಗಳು ಬೆಂಗಳೂರು ನಗರ ಡಿಸಿ ಕಚೇರಿ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಜೆ.ಮಂಜುನಾಥ್ ಜಿಲ್ಲಾಧಿಕಾರಿಯಾಗಿದ್ದರು. ಡಿಸಿ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಮ್ಯಾನೇಜರ್ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದರು.
ಭ್ರಷ್ಟಾಚಾರ ಪ್ರಕರಣದ ವಿಚಾರಣೆ ಹಂತದಲ್ಲಿರುವಾಗಲೇ ಡಿಸಿ ಮಂಜುನಾಥ್ ಐಸಿಪಿಎಸ್ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದರು. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸಿಬಿ ಅಧಿಕಾರಿಗಳು ಜೆ.ಮಂಜುನಾಥ್ ಅವರನ್ನು ಬಂಧಿಸಿದ್ದಾರೆ.