ಬೆಂಗಳೂರು: ಸರ್ಕಾರಿ ಜಮೀನು ಗುತ್ತಿಗೆಗೆ ನೀಡಲು ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಳುಮೆಣಸು, ಏಲಕ್ಕಿ, ಕಾಫಿ ಬೆಳೆಗಾರರು ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಸರ್ಕಾರಿ ಜಮೀನುಗಳನ್ನು ಅವರಿಗೇ ಗುತ್ತಿಗೆ ನೀಡುವ ಉದ್ದೇಶದಿಂದ ಕರ್ನಾಟಕ ಭೂ ಕಂದಾಯ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಹೇಳಿದ್ದಾರೆ.
ಕಾಫಿ, ಕಾಳು ಮೆಣಸು, ಏಲಕ್ಕಿ ಮೊದಲಾದ ವಾಣಿಜ್ಯ ಬೆಳೆ ಬೆಳೆಯುವ ರೈತರು ಸುಮಾರು 1 ಲಕ್ಷ ಎಕರೆಗೂ ಹೆಚ್ಚು ಸರ್ಕಾರಿ ಜಮೀನುಗಳನ್ನು ಅನಧಿಕೃತವಾಗಿ ಸಾಗುವಳಿ ಮಾಡುತ್ತಿದ್ದು, ಈ ಜಮೀನುಗಳನ್ನು ಅವರಿಗೆ ದೀರ್ಘಾವಧಿಗೆ ಗುತ್ತಿಗೆ ನೀಡಲು ಕಾಯ್ದೆಗೆ ತಿದ್ದುಪಡಿ ತರಲು ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡಲಾಗುವುದು ಎಂದರು.
ಕೊಡಗು ಜಿಲ್ಲೆಯಲ್ಲಿ 9 ಸಾವಿರ, ಹಾಸನ ಜಿಲ್ಲೆಯಲ್ಲಿ 30 ಸಾವಿರ ರೂ., ಚಿಕ್ಕಮಗಳೂರು ಜಿಲ್ಲೆಯಲ್ಲಿ 45 ಸಾವಿರ ಎಕರೆ ಜಮೀನು ವಾಣಿಜ್ಯ ಬೆಳೆಗಾರರು ಸಾಗುವಳಿ ಮಾಡುತ್ತಿದ್ದಾರೆ. ಈ ಸರ್ಕಾರಿ ಜಮೀನು ಗುತ್ತಿಗೆ ನೀಡುವ ಮೂಲಕ ಸರ್ಕಾರದ ಹಕ್ಕನ್ನು ಖಾತರಿಪಡಿಸಲಾಗುವುದು ಎಂದರು.