ಚಿಕ್ಕಮಗಳೂರು: ಶಾಲೆಯಿಂದ ಮನೆಗೆ ಹೋಗುತ್ತಿದ್ದ ಬಾಲಕಿ ಹಳ್ಳದಲ್ಲಿ ಕೊಚ್ಚಿ ಹೋದ ಘಟನೆ ನಡೆದಿದೆ. 7 ವರ್ಷದ ಬಾಲಕಿ ಸುಪ್ರೀತಾ ಹಳ್ಳದಲ್ಲಿ ಕೊಚ್ಚಿ ಹೋದ ಬಾಲಕಿ ಎಂದು ಹೇಳಲಾಗಿದೆ.
ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಸುಪ್ರೀತಾ ಹೊಸಪೇಟೆ ಕಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿಯಾಗಿದ್ದಾಳೆ. ಭಾರೀ ಮಳೆಯ ಕಾರಣ ಹಳ್ಳದಲ್ಲಿ ನೀರು ಹೆಚ್ಚಾಗಿದೆ. ಸುಪ್ರೀತಾ ಶಾಲೆ ಮುಗಿಸಿಕೊಂಡು ಅಣ್ಣನ ಜೊತೆಗೆ ಮನೆಗೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.