ವಸತಿ ಶಾಲೆ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಇನ್ನು ಮುಂದೆ ಆರನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ನೀಡಲು ತೀರ್ಮಾನಿಸಲಾಗಿದೆ.
ಸೋಮವಾರದಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಡಕಮಾರನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಈ ಮಾಹಿತಿ ನೀಡಿದ್ದಾರೆ.
ವಿದೇಶದಲ್ಲಿದ್ದಂತೆ ಇನ್ನು ಮುಂದೆ ರಾಜ್ಯದ ಎಲ್ಲ ವಸತಿ ಶಾಲೆಗಳಲ್ಲಿ ಆರನೇ ತರಗತಿಯಿಂದಲೇ ಕಂಪ್ಯೂಟರ್ ಶಿಕ್ಷಣವನ್ನು ಜಾರಿಗೊಳಿಸಲು ತೀರ್ಮಾನಿಸಲಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.