ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನಿಸಲಾಗಿದೆ.
ಕೋಲಾರ ಕಾಂಗ್ರೆಸ್ ಪಕ್ಷದ ನಾಯಕರ ನಿಯೋಗದಿಂದ ಸಿದ್ದರಾಮಯ್ಯ ಅವರಿಗೆ ಕೋಲಾರ ಜಿಲ್ಲೆಯಲ್ಲಿ ಸ್ಪರ್ಧಿಸುವಂತೆ ಮನವಿ ಮಾಡಲಾಗಿದೆ. ಬೆಂಗಳೂರು ಸಮೀಪವಿರುವ ಕ್ಷೇತ್ರ ಇದಾಗಿದ್ದು, ನಿಮ್ಮ ಸ್ಪರ್ಧೆಗೆ ಸುರಕ್ಷಿತ ಕ್ಷೇತ್ರವಾಗಿದೆ. ಹೀಗಾಗಿ ಕೋಲಾರದಿಂದ ಸ್ಪರ್ಧಿಸುವಂತೆ ನಿಯೋಗದಿಂದ ಆಹ್ವಾನ ನೀಡಲಾಗಿದೆ. ಕೋಲಾರ ನಾಯಕರ ಸಭೆಯ ನಂತರ ಸಿದ್ದರಾಮಯ್ಯನವರಿಗೆ ಆಹ್ವಾನಿಸಲಾಗಿದೆ.