ಕಲಬುರಗಿ: ಪ್ರಸಕ್ತ 2022-23ನೇ ಸಾಲಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮತ್ತು ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಕಲಬುರಗಿ ತಾಲೂಕಿನಲ್ಲಿ ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ ಮತ್ತು ಉಳಿದ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಕಲಬುರಗಿ ಕೃಷಿ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ತೊಗರಿ(ಮಳೆ ಆಶ್ರಿತ) ಬೆಳೆಯು ಗ್ರಾಮ ಪಂಚಾಯತಿ ಮಟ್ಟಕ್ಕೆ ಮತ್ತು ಉಳಿದ ಸಜ್ಜೆ, ಉದ್ದು, ಹೆಸರು, ಎಳ್ಳು, ಸೂರ್ಯಕಾಂತಿ, ಸೋಯಾ ಅವರೆ, ಹತ್ತಿ ಮತ್ತು ಮುಸುಕಿನ ಜೋಳ ಹೋಬಳಿ ಮಟ್ಟಕ್ಕೆ ಅಧಿಸೂಚನೆ ಹೊರಡಿಸಲಾಗಿದೆ.
ಬೆಳೆ ವಿಮಾ ಮೊತ್ತವನ್ನು ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಪಾವತಿಸಬೇಕಾಗಿದೆ. ಬೆಳೆ ವಿಮಾ ಮೊತ್ತ ಪಾವತಿಗೆ 2022ರ ಜುಲೈ 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಯನ್ನು ರೈತ ಸಂಪರ್ಕ ಕೇಂದ್ರ ಹಾಗೂ ಕಲಬುರಗಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.