alex Certify BIG NEWS: ಬರೋಬ್ಬರಿ 42 ಬಾರಿ ಚಾಕುವಿನಿಂದ ಇರಿದು ಹತ್ಯೆ; ಚಂದ್ರಶೇಖರ್ ಗುರೂಜಿ ಮರಣೋತ್ತರ ಪರೀಕ್ಷೆ ವರದಿ ಬಗ್ಗೆ ಡಾ.ಸುನೀಲ್ ಬಿರಾದಾರ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬರೋಬ್ಬರಿ 42 ಬಾರಿ ಚಾಕುವಿನಿಂದ ಇರಿದು ಹತ್ಯೆ; ಚಂದ್ರಶೇಖರ್ ಗುರೂಜಿ ಮರಣೋತ್ತರ ಪರೀಕ್ಷೆ ವರದಿ ಬಗ್ಗೆ ಡಾ.ಸುನೀಲ್ ಬಿರಾದಾರ್ ಮಾಹಿತಿ

ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ಪೋಸ್ಟ್ ಮಾರ್ಟಮ್ ವರದಿ ಬಗ್ಗೆ ಡಾ.ಸುನೀಲ್ ಬಿರಾದಾರ್ ಮಾಹಿತಿ ನೀಡಿದ್ದಾರೆ.

ಕಿಮ್ಸ್ ಆಸ್ಪತ್ರೆಯ ವಿಧಿವಿಜ್ಞಾನ ವಿಭಾಗದ ಡಾ.ಸುನೀಲ್ ಬಿರಾದಾರ್ ನೇತೃತ್ವದಲ್ಲಿ ಚಂದ್ರಶೇಖರ್ ಗುರೂಜಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಗುರೂಜಿಯವರಿಗೆ ದುಷ್ಕರ್ಮಿಗಳು ಬರೋಬ್ಬರಿ 42 ಬಾರಿ ಚಾಕುವಿನಿಂದ ಇರಿದಿದ್ದಾರೆ. ಕುತ್ತಿಗೆಯ ಭಾಗದಲ್ಲಿ ಎರಡು ಕಡೆ ಇರಿದ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ.

ಕುತ್ತಿಗೆಯ ಭಾಗದಲ್ಲಿ ಎರಡು ಕಡೆ 2-3 ಇಂಚಿನಷ್ಟು ಆಳವಾಗಿ ಇರಿತದ ಗಾಯವಾಗಿದೆ. ಕುತ್ತಿಗೆ ಭಾಗದಲ್ಲಿ ಇರಿದಿದ್ದರಿಂದ ಹೆಚ್ಚು ರಕ್ತಸ್ರಾವವಾಗಿದೆ. ದೇಹದ 42 ಕಡೆ ಚಾಕುವಿನಿಂದ ಇರಿದ ಗುರು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆ ಬಳಿಕ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಿಂದ ಸುಳ್ಳ ಗ್ರಾಮಕ್ಕೆ ಗುರೂಜಿ ಮೃತದೇಹ ಕೊಂಡಯ್ಯಲಾಗುತ್ತಿದ್ದು, ಸಂಜೆ ಸುಳ್ಳ ಗ್ರಾಮದಲ್ಲಿಯೇ ಅಂತ್ಯಕ್ರಿಯೆ ನೆರವೇರಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...