ಬೆಂಗಳೂರು: ರಾಜ್ಯದ ಕರಾವಳಿ, ಪಶ್ಚಿಮಘಟ್ಟ, ಮಲೆನಾಡು ಭಾಗದಲ್ಲಿ ಭಾರಿ ಮಳೆ ಮುಂದುವರೆದಿದೆ. ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಸುರಿಯುತ್ತಿದ್ದು, ಇಂದಿನಿಂದ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಮಳೆ ಅಬ್ಬರಿಸಲಿದೆ ಎಂದು ಹೇಳಲಾಗಿದೆ.
ಜುಲೈ 7ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಆಗಲಿದೆ. ಉತ್ತರ ಒಳನಾಡಿನ ಹಾವೇರಿ, ಧಾರವಾಡ, ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಆಗಲಿದ್ದು ಆರೆಂಜ್ ಅಲರ್ಟ್ ನೀಡಲಾಗಿದೆ.
ಹಲವು ಕಡೆ ಭಾರಿ ಮಳೆಯ ಕಾರಣ ಗುಡ್ಡ ಕುಸಿದಿವೆ. ರಸ್ತೆ, ಸೇತುವೆ, ಮನೆಗಳಿಗೆ ಹಾನಿಯಾಗಿದೆ. ಜಮೀನುಗಳು ಜಲಾವೃತಗೊಂಡಿವೆ. ಭಾರಿ ಮಳೆಯಾಗುತ್ತಿರುವ ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿ 6 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.