ತಮ್ಮ ಪಕ್ಷದ ಶಾಸಕರು ಬಂಡಾಯವೆದ್ದ ಕಾರಣ ‘ಮಹಾ ವಿಕಾಸ್ ಅಘಾಡಿ’ ಮೈತ್ರಿಕೂಟದಲ್ಲಿ ಮುಖ್ಯಮಂತ್ರಿಯಾಗಿದ್ದ ಶಿವಸೇನೆಯ ಉದ್ಧವ್ ಠಾಕ್ರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ ಮುಖ್ಯಮಂತ್ರಿಯಾಗಿ ಬಂಡಾಯ ಶಾಸಕರುಗಳ ನಾಯಕ ಏಕನಾಥ್ ಶಿಂಧೆ ಪ್ರಮಾಣವಚನ ಸ್ವೀಕರಿಸಿದ್ದರು.
30ಕ್ಕೂ ಅಧಿಕ ಶಾಸಕರು ಈಗ ತಮ್ಮ ನಿಷ್ಠೆಯನ್ನು ಬದಲಿಸಿರುವ ಕಾರಣ ಉದ್ಧವ್ ಠಾಕ್ರೆ ಅವರೊಂದಿಗೆ ಈಗ ಕೇವಲ 12 ಶಾಸಕರಿದ್ದಾರೆ. ಹೀಗಾಗಿ ಶಿವಸೇನೆಯನ್ನು ತಮ್ಮ ಹಿಡಿತದಲ್ಲೇ ಇರಿಸಿಕೊಳ್ಳಬೇಕೆಂಬ ಉದ್ಧವ್ ಠಾಕ್ರೆ ಅವರ ಉದ್ದೇಶಕ್ಕೆ ಹಿನ್ನಡೆಯಾಗಿದೆ. ಇದರ ಮಧ್ಯೆ ಅವರಿಗೆ ಮತ್ತೊಂದು ಶಾಕ್ ಎದುರಾಗಿದೆ.
ಶಿವಸೇನೆಯ 18 ಸಂಸದರ ಪೈಕಿ 12 ಮಂದಿ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೊಂದಿಗೆ ಗುರುತಿಸಿಕೊಳ್ಳಲು ಮುಂದಾಗಿದ್ದು, ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲಿದ್ದಾರೆ ಎಂದು ಹೇಳಲಾಗಿದೆ.