ಮಹೇಶ್ ಬಾಬು ನಿರ್ದೇಶನದ ಸುಘೋಷ್ ನಟನೆಯ ‘ಅಪರೂಪ’ ಚಿತ್ರದ ಟೀಸರ್ ಇಂದು ಆನಂದ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಈ ಟೀಸರ್ ಸಾಕಷ್ಟು ವೀಕ್ಷಣೆ ಪಡೆದಿದ್ದು, ನೋಡುಗರಿಂದ ಉತ್ತಮ ಪ್ರತಿಕ್ರಿಯೆಗಳು ದೊರೆತಿದೆ.
ಈ ಸಿನಿಮಾದಲ್ಲಿ ಸುಘೋಷ್ ಸೇರಿದಂತೆ ರಿತಿಕಾ ಶ್ರೀನಿವಾಸ್, ಅಶೋಕ, ಅರುಣಾ ಬಾಲರಾಜ್, ಅವಿನಾಶ್ ಸೇರಿದಂತೆ ಹಲವಾರು ಹೊಸ ಕಲಾವಿದರು ಅಭಿನಯಿಸಿದ್ದಾರೆ.
ಸುಗ್ಗಿ ಸಿನಿಮಾಸ್ ಬ್ಯಾನರ್ ನಡಿ ಕೆ ಆರ್ ಮಹೇಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಪ್ರಜ್ವಲ್ ಪೈ ಸಂಗೀತ ನೀಡಿದ್ದಾರೆ. ಕೆಜಿಎಫ್ ನಿರ್ಮಾಪಕ ವಿಜಯ್ ಕಿರಗಂದೂರು ಇಂದು ಈ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.