ಕೊಲಂಬೋ: ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು ತೀವ್ರಗೊಂಡಿದೆ. ಶ್ರೀಲಂಕಾ ಅಧ್ಯಕ್ಷರ ವಿರುದ್ಧ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಅಧ್ಯಕ್ಷ ಗೋಟಬಯ ರಾಜಪಕ್ಸ ನಿವಾಸಕ್ಕೆ ನುಗ್ಗಿದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾವಿರಾರು ಜನರು ಅಧ್ಯಕ್ಷರ ಮನೆಗೆ ನುಗ್ಗಿದ್ದು, ಜನಾಕ್ರೋಶಕ್ಕೆ ಬೆದರಿ ಅಧ್ಯಕ್ಷ ರಾಜಪಕ್ಸ ಪರಾರಿಯಾಗಿದ್ದಾರೆ. ಅಶ್ರುವಾಯು ಪ್ರಯೋಗಕ್ಕೂ ಜನ ಹಿಂಜರಿಯುತ್ತಿಲ್ಲ. ಪೊಲೀಸರು ಮತ್ತು ಪ್ರತಿಭಟನಾಕಾರರ ಮಧ್ಯೆ ಘರ್ಷಣೆ ನಡೆದಿದೆ.
ಈ ನಡುವೆ ಜನಾಕ್ರೋಶಕ್ಕೆ ಮಣಿದು ಶ್ರೀಲಂಕಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಲು ರನಿಲ್ ವಿಕ್ರಮ ಸಿಂಘೆ ನಿರ್ಧರಿಸಿದ್ದಾರೆ. ಲಕ್ಷಾಂತರ ಜನ ಅಧ್ಯಕ್ಷರ ನಿವಾಸಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದು, ಆರ್ಥಿಕ ಬಿಕ್ಕಟ್ಟು ಖಂಡಿಸಿ ಕೊಲಂಬೋದಲ್ಲಿ ಭಾರೀ ಪ್ರತಿಭಟನೆ ಹಿನ್ನೆಲೆಯಲ್ಲಿ ಶ್ರೀಲಂಕಾ ಪ್ರಧಾನಿ ಸ್ಥಾನಕ್ಕೆ ರನಿಲ್ ವಿಕ್ರಮ ಸಿಂಘೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ.
ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಶನಿವಾರ ರಾಜಕೀಯ ನಾಯಕರಿಗೆ ರಾಜೀನಾಮೆ ನೀಡಿ ಹೊಸ ಸರ್ಕಾರಕ್ಕೆ ದಾರಿ ಮಾಡಿಕೊಡಲು ಸಿದ್ಧರಿದ್ದಾರೆ ಎಂದು ಹೇಳಿದ್ದಾರೆ. ವಿಕ್ರಮಸಿಂಘೆ ಅವರು ಇಂಧನ ವಿತರಣೆಯನ್ನು ಪುನರಾರಂಭಿಸುವುದರಿಂದ ಮತ್ತು ಅಂತರರಾಷ್ಟ್ರೀಯ ಹಣಕಾಸು ನಿಧಿಯ ಸಾಲದ ಸುಸ್ಥಿರತೆಯ ವರದಿಯನ್ನು ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದು ಎಂದು ಅವರ ಮಾಧ್ಯಮ ಕಚೇರಿಯ ಹೇಳಿಕೆಯಲ್ಲಿ ತಿಳಿಸಲಾಗಿದೆ.