ಆರ್ಥಿಕ ಸಂಕಷ್ಟದಿಂದ ತತ್ತರಿಸಿರುವ ಶ್ರೀಲಂಕಾ ಜನತೆ ಸರ್ಕಾರದ ವಿರುದ್ಧ ದಂಗೆ ಎದ್ದಿದ್ದಾರೆ. ಶನಿವಾರದಂದು ದೇಶದ ಮೂಲೆ ಮೂಲೆಗಳಿಂದ ಬಂದ ಪ್ರತಿಭಟನಾಕಾರರು ಕೊಲಂಬೋದಲ್ಲಿರುವ ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸ ಅವರ ನಿವಾಸಕ್ಕೆ ನುಗ್ಗಿ ಬೆಂಕಿ ಹಚ್ಚಿದ್ದಾರೆ.
ಪ್ರತಿಭಟನಾಕಾರರ ಈ ದಂಗೆಯಿಂದ ಕಂಗೆಟ್ಟಿರುವ ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸ ಕುಟುಂಬ ಸಮೇತ ಪರಾರಿಯಾಗಿದ್ದು, ವಿಮಾನದಲ್ಲಿ ವಿದೇಶಕ್ಕೆ ತೆರಳಿರಬಹುದು ಎಂದು ಹೇಳಲಾಗುತ್ತಿದೆ. ಇದರ ಮಧ್ಯೆ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ನಡುವೆ ಪ್ರತಿಭಟನಾಕಾರರಿಗೆ ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಸನತ್ ಜಯಸೂರ್ಯ ಬೆಂಬಲ ಸೂಚಿಸಿದ್ದು, ಶ್ರೀಲಂಕಾ ಅಧ್ಯಕ್ಷರ ಮನೆಗೆ ಪ್ರತಿಭಟನಾಕಾರರು ಮುತ್ತಿಗೆ ಹಾಕಿದ್ದ ಸಂದರ್ಭದಲ್ಲಿ ಅಲ್ಲಿಗೆ ಭೇಟಿ ನೀಡಿದ್ದಾರೆ. ಮಾಜಿ ಕ್ರಿಕೆಟಿಗರಾದ ಕುಮಾರ ಸಂಗಕ್ಕಾರ, ಮಹೇಲಾ ಜಯವರ್ಧನೆ ಕೂಡ ತಮ್ಮ ಬೆಂಬಲ ಘೋಷಿಸಿದ್ದಾರೆ.
https://twitter.com/Sanath07/status/1545695749177896960?ref_src=twsrc%5Etfw%7Ctwcamp%5Etweetembed%7Ctwterm%5E1545695749177896960%7Ctwgr%5E%7Ctwcon%5Es1_&ref_url=https%3A%2F%2Fwww.indiatoday.in%2Findia%2Fstory%2Fyour-bastion-has-fallen-sanath-jayas-protest-sri-lanka-president-gotabaya-1973728-2022-07-09