alex Certify BIG BREAKING: ಮೂರು ದಿನಗಳಿಂದ ಪ್ರತಿನಿತ್ಯ 18,000ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; 24 ಗಂಟೆಯಲ್ಲಿ ಮತ್ತೆ 40ಕ್ಕೂ ಹೆಚ್ಚು ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಮೂರು ದಿನಗಳಿಂದ ಪ್ರತಿನಿತ್ಯ 18,000ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆ; 24 ಗಂಟೆಯಲ್ಲಿ ಮತ್ತೆ 40ಕ್ಕೂ ಹೆಚ್ಚು ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ ಮೂರು ದಿನಗಳಿಂದ ಸತತವಾಗಿ ಪ್ರತಿದಿನ 18 ಸಾವಿರಕ್ಕೂ ಹೆಚ್ಚು ಜನರಲ್ಲಿ ಕೋವಿಡ್ ಪತ್ತೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ಮತ್ತೆ 18,257 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದ್ದು, 24 ಗಂಟೆಯಲ್ಲಿ 42 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,25,428ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,28,690 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 14,553 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,29,68,533 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 10,21,164 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,98,76,59,299 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 4,32,777 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

— ANI (@ANI) July 10, 2022

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...