ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಅದರಲ್ಲೂ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ವರುಣಾರ್ಭಟ ಜೋರಾಗಿದೆ. ಇದರ ಪರಿಣಾಮ ಹಳ್ಳ ಕೊಳ್ಳ, ನದಿಗಳು ಉಕ್ಕಿ ಹರಿಯುತ್ತಿದ್ದು, ಕೆಳವೆಡೆ ರಸ್ತೆ ಮೇಲೆ ನೀರು ಹರಿಯುತ್ತಿದೆ.
ಅಲ್ಲದೆ ವ್ಯಾಪಕ ಮಳೆಯ ಕಾರಣ ಅಲ್ಲಲ್ಲಿ ಗುಡ್ಡ ಕುಸಿದಿದ್ದು ಮರಗಳು ರಸ್ತೆಗೆ ಬೀಳುತ್ತಿವೆ. ಇದೇ ರೀತಿ ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ಗುಡ್ಡ ಕುಸಿತದ ಪರಿಣಾಮ ಮರ ರಸ್ತೆಗೆ ಬಿದ್ದಿದೆ. ಇದರ ಪರಿಣಾಮವಾಗಿ ಶಿವಮೊಗ್ಗ – ಉಡುಪಿ ಜಿಲ್ಲೆಗಳ ಸಂಪರ್ಕ ಕಡಿತಗೊಂಡಿದೆ.
ಬದಲಿ ಮಾರ್ಗಗಳ ಮೂಲಕ ವಾಹನಗಳು ಶಿವಮೊಗ್ಗ – ಉಡುಪಿಗೆ ತೆರಳುತ್ತಿದ್ದು, ಮಳೆ ಮುಂದುವರೆದಿರುವ ಕಾರಣ ರಸ್ತೆಯನ್ನು ತೆರವುಗೊಳಿಸುವ ಕಾರ್ಯ ವಿಳಂಬವಾಗುತ್ತಿದೆ. ಹೀಗಾಗಿ ವಾಹನ ಸವಾರರು ಬದಲಿ ಮಾರ್ಗದ ಮೂಲಕವೇ ಉಭಯ ಜಿಲ್ಲೆಗಳ ನಡುವೆ ಸಂಚರಿಸಬೇಕಿದೆ.