alex Certify BIG NEWS: ವರುಣಾರ್ಭಟಕ್ಕೆ ಕೊಚ್ಚಿ ಹೋದ ಜೋಗ್ ಫಾಲ್ಸ್ ಬಳಿಯ ರಸ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವರುಣಾರ್ಭಟಕ್ಕೆ ಕೊಚ್ಚಿ ಹೋದ ಜೋಗ್ ಫಾಲ್ಸ್ ಬಳಿಯ ರಸ್ತೆ

 ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಾದ್ಯಂತ ಸತವಾಗಿ ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜೋಗ್ ಫಾಲ್ಸ್ ಬಳಿಯ ರಸ್ತೆ ನೀರಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.

ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವು ರಸ್ತೆಗಳು ಜಲಾವೃತಗೊಂಡಿವೆ. ಮಳೆಯ ಅಬ್ಬರಕ್ಕೆ ಜೋಗ್ ಫಾಲ್ಸ್ ಬಳಿ ರಸ್ತೆಯೇ ಕೊಚ್ಚಿ ಹೋಗಿದೆ. ಈಶ್ವರ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ರಸ್ತೆ ಸಂಪೂರ್ಣ ಹಾನಿಯಾಗಿದ್ದು, ತಾತ್ಕಾಲಿಕವಾಗಿ ಸಂಚಾರ ಬಂದ್ ಮಾಡಲಾಗಿದೆ.

ಧಾರಾಕಾರ ಮಳೆಗೆ ಹೊಸನಗರ ತಾಲೂಕಿನ ಕೆಂಚನಾಲ ಗ್ರಾಮದಲ್ಲಿ ಮನೆ ಕುಸಿದು ಬಿದ್ದಿದೆ. ಶಫಿಅಹ್ಮದ್ ನಿಸಾಜಾನ್ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಳವಳ್ಳಿ ಗ್ರಾಮದಲ್ಲಿ ಭಾರಿ ಮಳೆಯಿಂದಾಗಿ ಮನೆಯ ಮೇಲೆ ತೆಂಗಿನ ಮರ ಬಿದ್ದ ಪರಿಣಾಮ ಮನೆ ಭಾಗಶಃ ಹಾನಿಯಾಗಿದೆ. ಶಿವಮೊಗ್ಗ ಜಿಲೆಯಲ್ಲಿ ಮಳೆ ಅವಾಂತರದಿಂದಾಗಿ ಜನರು ಸಂಕಷ್ಟಕ್ಕೀಡಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...