alex Certify BIG NEWS: 31 ಜಿಲ್ಲೆಗಳಲ್ಲಿ ಏಕಕಾಲಕ್ಕೆ ‘ಯೋಗಥಾನ್’; ಗಿನ್ನೆಸ್‌ ದಾಖಲೆ ನಿರ್ಮಾಣಕ್ಕೆ ಮುಹೂರ್ತ ಫಿಕ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 31 ಜಿಲ್ಲೆಗಳಲ್ಲಿ ಏಕಕಾಲಕ್ಕೆ ‘ಯೋಗಥಾನ್’; ಗಿನ್ನೆಸ್‌ ದಾಖಲೆ ನಿರ್ಮಾಣಕ್ಕೆ ಮುಹೂರ್ತ ಫಿಕ್ಸ್

ಬೆಂಗಳೂರು: ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಯೋಗಥಾನ್ ಹಮ್ಮಿಕೊಳ್ಳಲಾಗಿದ್ದು ಆಗಸ್ಟ್ 28 ರಂದು ಗಿನ್ನೆಸ್ ದಾಖಲೆ ನಿರ್ಮಿಸಲಾಗುವುದು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವರು, ರಾಜ್ಯದ 31 ಜಿಲ್ಲೆಗಳಲ್ಲಿ ಯೋಗಥಾನ್ ಆಯೋಜಿಸಲಾಗುತ್ತಿದೆ. ಯೋಗದ ಮಹತ್ವವನ್ನು ವಿಶ್ವಕ್ಕೆ ಸಾರುವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ 5 ಲಕ್ಷ ಜನರು ಸೇರಿ ಆಗಸ್ಟ್ 28 ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಸೇರಿ ‘ಯೋಗಥಾನ್’ ನಡೆಸಲಿದ್ದು, ಗಿನ್ನೀಸ್ ವಿಶ್ವದಾಖಲೆಗೆ ಪ್ರಯತ್ನಿಸಲಾಗುವುದು ಎಂದರು.

ಯೋಗಕ್ಕೆ ಕ್ರೀಡೆಯ ಮಾನ್ಯತೆ ನೀಡಿ ಇದೇ ಮೊದಲ ಬಾರಿಗೆ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ ನಲ್ಲಿ ಅಳವಡಿಸಲಾಗಿತ್ತು. ಯೋಗಥಾನ್‌ಗೆ ನಟ ರಮೇಶ್ ಅರವಿಂದ್ ರಾಯಭಾರಿಯಾಗಿದ್ದಾರೆ. ಯೋಗದ ತವರೂರಾದ ಭಾರತ ಅದರಲ್ಲೂ ಕರ್ನಾಟಕದಲ್ಲಿ ಯೋಗವನ್ನು ಮನೆ-ಮನೆಗೆ ತಲುಪಿಸುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...