
ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದೆ. 24 ಗಂಟೆಗಳಲ್ಲಿ 8 ಪ್ರದೇಶಗಳಲ್ಲಿ 100 ಮಿಲಿ ಮೀಟರ್ ಗೂ ಹೆಚ್ಚಿನ ಮಳೆಯಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದ ಮಳೆ ಸುರಿದಿದೆ. ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್ ಪ್ರದೇಶದಲ್ಲಿ 152.4 ಮಿಲಿಮೀಟರ್ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ ವ್ಯಾಪ್ತಿಯಲ್ಲಿ 159.8 ಮಿಲಿಮೀಟರ್ ಮಳೆಯಾಗಿದೆ. ಉಡುಪಿ ಜಿಲ್ಲೆಯ ಕೋಟ ವ್ಯಾಪ್ತಿಯಲ್ಲಿ 118.8 ಮಿಲಿ ಮೀಟರ್ ಮಳೆಯಾಗಿದೆ. 7 ಪ್ರದೇಶಗಳಲ್ಲಿ 80 ಮಿಲಿಮೀಟರ್ ನಿಂದ 100 ಮಿ.ಮೀ.ವರೆಗೆ ಮಳೆಯಾಗಿದೆ. ಕುಂದಾಪುರ, ಬೆಳ್ತಂಗಡಿ, ಮಾನಕಿ, ಪಣಂಬೂರು, ಗೋಕರ್ಣ, ಸುಳ್ಯ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ 92.5 ಮಿಲಿಮೀಟರ್ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರಿನಲ್ಲಿ 80.4 ಮಿಲಿ ಮೀಟರ್ ಮಳೆಯಾಗಿದೆ. ಮಂಗಳೂರಿನಲ್ಲಿ 87.5 ಮಿಮೀ, ಸುಳ್ಯ 75.6 ಕುಮಟಾ ತಾಲೂಕಿನ ಗೋಕರ್ಣದಲ್ಲಿ 80.3 ಮಿಲಿಮೀಟರ್ ಮಳೆಯಾಗಿದೆ ಎಂದು ಕರಾವಳಿ ಭಾಗದಲ್ಲಿ ಭಾರಿ ಮಳೆಯಾದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.