ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು, ನಾಳೆ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಕಂದಾಯ ಸಚಿವ ಆರ್. ಅಶೋಕ್ ಸೇರಿದಂತೆ ಹಲವು ಸಚಿವರು ಸಿಎಂಗೆ ಸಾಥ್ ನೀಡಲಿದ್ದಾರೆ. ರಾಜ್ಯದ ಮಲೆನಾಡು, ಕರಾವಳಿ ಸೇರಿದಂತೆ ಭಾರಿ ಮಳೆಯಿಂದಾಗಿ ಹಾನಿಗೊಳಗಾದ ಜಿಲ್ಲೆಗಳಿಗೆ ಸಿಎಂ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ.
ಮಳೆ ಹಾನಿ ಹಾಗೂ ಪರಿಹಾರ ಕಾಮಗಾರಿಗಳ ಪರಿಶೀಲನೆ ನಡೆಸಲಿರುವ ಸಿಎಂ ಸಂತ್ರಸ್ತರಿಗೆ ಪರಿಹಾರ ವಿತರಣೆಗೆ ನಿರ್ದೇಶನ ನೀಡಲಿದ್ದಾರೆ. ಕೊಡಗು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಭಾರಿ ಹಾನಿಯಾಗಿದ್ದು, ಈ ಪ್ರದೇಶಗಳಲ್ಲಿ ಸಚಿವರು, ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ಸಭೆ ನಡೆಸಲಿರುವ ಸಿಎಂ ಪರಿಹಾರ ಕೈಗೊಳ್ಳಲು ಸೂಚನೆ ನೀಡಲಿದ್ದಾರೆ.