ಆದಾಯ ತೆರಿಗೆದಾರರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. 2021 – 22 ನೇ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಜುಲೈ 31 ಕೊನೆ ದಿನವಾಗಿದೆ.
ಆದರೆ ಇ ಫೈಲಿಂಗ್ ಪೋರ್ಟಲ್ ನಲ್ಲಿ ಹಲವು ತಾಂತ್ರಿಕ ದೋಷಗಳು ಕಾಣಿಸಿಕೊಂಡಿದ್ದ ಪರಿಣಾಮ ಬಹಳಷ್ಟು ಮಂದಿ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಎಂಬ ದೂರುಗಳು ಕೇಳಿ ಬಂದಿವೆ.
ಈವರೆಗೆ 99 ಲಕ್ಷ ಐಟಿ ರಿಟರ್ನ್ಸ್ ಗಳಷ್ಟೇ ಸಲ್ಲಿಕೆಯಾಗಿದೆ ಎಂದು ಹೇಳಲಾಗಿದ್ದು, ಇನ್ನೂ 6.5 ಕೋಟಿ ಮಂದಿ ರಿಟರ್ನ್ಸ್ ಸಲ್ಲಿಸಬೇಕಾಗಿದೆ. ಕೇಂದ್ರ ಸರ್ಕಾರ ರಿಟರ್ನ್ಸ್ ಸಲ್ಲಿಸಲು ಗಡುವನ್ನು ವಿಸ್ತರಿಸುವ ಸಾಧ್ಯತೆ ಇದೆಯಾದರೂ ಒಂದೊಮ್ಮೆ ವಿಸ್ತರಣೆಯಾಗದಿದ್ದರೆ ದಂಡ ಪಾವತಿಸಬೇಕಾಗುತ್ತದೆ.