ಚಿಕ್ಕಬಳ್ಳಾಪುರ: ಮನೆಯಲ್ಲೇ ಅಂಗನವಾಡಿ ಶಿಕ್ಷಕಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಾಯನಹಳ್ಳಿಯಲ್ಲಿ ಕತ್ತು ಸೀಳಿ 52 ವರ್ಷದ ವೆಂಕಟಲಕ್ಷ್ಮಮ್ಮ ಅವರನ್ನು ಕೊಲೆ ಮಾಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ನಾಯನಹಳ್ಳಿಯಲ್ಲಿ ಘಟನೆ ನಡೆದಿದ್ದು, ಶಿಕ್ಷಕಿಯ ಮನೆಯ ಬಿಬೀವಿನಲ್ಲಿದ್ದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿ ಆಗಿವೆ. ದುಷ್ಕರ್ಮಿಗಳು ಶಿಕ್ಷಕಿಯನ್ನು ಹತ್ಯೆ ಮಾಡಿ ದರೋಡೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಚಿಂತಾಮಣಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.