ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಕೇಂದ್ರ ಸರ್ಕಾರ ಭಾನುವಾರ ಬೆಳಗ್ಗೆ ಸರ್ವಪಕ್ಷ ಸಭೆಗೆ ಕರೆ ನೀಡಿದೆ.
ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಸಭೆ ಕರೆದಿದ್ದು, ಈ ಸಭೆಗೆ ಎಲ್ಲ ರಾಜಕೀಯ ಪಕ್ಷಗಳ ಮುಖಂಡರನ್ನು ಆಹ್ವಾನಿಸಲಾಗಿದೆ.
ಭಾರತ-ಚೀನಾ ಗಡಿ ಬಿಕ್ಕಟ್ಟು ಮತ್ತು ಸಶಸ್ತ್ರ ಪಡೆಗಳಿಗೆ ಅಲ್ಪಾವಧಿಯ ನೇಮಕಾತಿಗಾಗಿ ಅಗ್ನಿಪಥ್ ಯೋಜನೆಯು ಮುಂಬರುವ ಅಧಿವೇಶನದಲ್ಲಿ ಪ್ರತಿಪಕ್ಷಗಳು ಪ್ರಸ್ತಾಪಿಸುವ ಕೆಲವು ವಿಷಯಗಳಾಗಿವೆ. ಇದಕ್ಕೂ ಮುನ್ನ ಜುಲೈ 10 ರಂದು ಎನ್.ಡಿ.ಎ. ನಾಯಕರು ಸಭೆ ಸೇರಿ ಮುಂಗಾರು ಅಧಿವೇಶನಕ್ಕೆ ಮುನ್ನ ಕಾರ್ಯತಂತ್ರದ ಕುರಿತು ವಿವರವಾದ ಚರ್ಚೆ ನಡೆಸಿದ್ದಾರೆ.
ಜುಲೈ 18 ರಂದು ಅಧಿವೇಶನದ ಆರಂಭಿಕ ದಿನದಂದು ಅಧ್ಯಕ್ಷರ ಆಯ್ಕೆ ಮತ್ತು ಆಗಸ್ಟ್ 6 ರಂದು ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಲಿದೆ.
ಅಧಿವೇಶನವು ಆಗಸ್ಟ್ 12 ರವರೆಗೆ ಮುಂದುವರೆಯಲಿದೆ. ಈ ಅಧಿವೇಶನದಲ್ಲಿ ರಾಷ್ಟ್ರಪತಿ ಚುನಾವಣೆ ಮತ್ತು ಉಪರಾಷ್ಟ್ರಪತಿ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಈ ಮುಂಗಾರು ಅಧಿವೇಶನ ಮಹತ್ವದ್ದಾಗಿದೆ.