ದಾವಣಗೆರೆ: ನೀ ಸುಮ್ಮನಿರಪ್ಪ ನಿನ್ನಿಂದ ಏನೂ ಆಗಲ್ಲ ಎಂದು ರೈತರೊಬ್ಬರು ಶಾಸಕ ರೇಣುಕಾಚಾರ್ಯ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ಹೊನ್ನಾಳಿಯಲ್ಲಿ ನಡೆದಿದೆ.
ಹೊನ್ನಾಳಿಯಲ್ಲಿ ನಡೆದ ಮಳೆ ಹಾನಿ ಪರಿಶೀಲನೆ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಅವರ ಸಮ್ಮುಖದಲ್ಲಿ ಶಾಸಕರನ್ನು ರೈತ ತರಾಟೆಗೆ ತೆಗೆದುಕೊಂಡಿದ್ದಾರೆ. ನಿನಗೆ ಕೈಮುಗಿಯುತ್ತೇನೆ ಸುಮ್ಮನಿರು ಎಂದು ರೈತ ತರಾಟೆಗೆ ತೆಗೆದುಕೊಂಡಿದ್ದು, ರೈತನ ಆಕ್ರೋಶಕ್ಕೆ ರೇಣುಕಾಚಾರ್ಯ ಗರಂ ಆಗಿದ್ದಾರೆ. ನಂತರ ರೈತ ರಾಜು ಅವರನ್ನು ಪೊಲೀಸರು ಸಭೆಯಿಂದ ಹೊರಗೆ ಕಳುಹಿಸಿದ್ದಾರೆ.
ತುಂಗಭದ್ರಾ ನದಿಯಲ್ಲಿ ಮತ್ತಷ್ಟು ನೀರಿನ ಪ್ರಮಾಣ ಹೆಚ್ಚಾಗಲಿದ್ದು, ನದಿ ಪಾತ್ರದ ಜನರನ್ನು ತಕ್ಷಣವೇ ಸ್ಥಳಾಂತರಿಸಬೇಕೆಂದು ದಾವಣಗೆರೆ ಜಿಲ್ಲೆ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಸೂಚನೆ ನೀಡಿದ್ದಾರೆ. ಹೊನ್ನಾಳಿಯಲ್ಲಿ ನಡೆದ ಮಳೆಹಾ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿ, ಹೊನ್ನಾಳಿ ಹಾಗೂ ಹರಿಹರ ತಾಲೂಕಿನಲ್ಲಿ ಪ್ರವಾಹ ಉಂಟಾಗಲಿದೆ. ಕಾಳಜಿ ಕೇಂದ್ರ ಆರಂಭಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆಯಲ್ಲಿ ಜುಲೈ 1 ರಿಂದ 113 ಮನೆಗಳಿಗೆ ಹಾನಿಯಾಗಿದ್ದು, ಶೀಘ್ರವೇ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.