ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳ ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಪ್ರಮುಖ ಆಹಾರ ಧಾನ್ಯವಾದ ಕುಚ್ಚಲಕ್ಕಿಯನ್ನು ಪಡಿತರದಲ್ಲಿ ವಿತರಿಸಲು ಸರ್ಕಾರ ಕ್ರಮ ಕೈಗೊಂಡಿದೆ.
ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ವಿಶೇಷ ಸಭೆಯಲ್ಲಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಪಡಿತರ ಚೀಟಿದಾರರಿಗೆ ಕುಚ್ಚಲಕ್ಕಿ ವಿತರಿಸಲು ಚರ್ಚೆ ನಡೆಸಲಾಗಿದೆ. ಈ ಭಾಗದ ಜನರ ಬಹುದಿನಗಳ ಬೇಡಿಕೆಯಂತೆ ಕುಚ್ಚಲಕ್ಕಿ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
ಪ್ರತಿ ತಿಂಗಳು ಒಂದು ಲಕ್ಷ ಕ್ವಿಂಟಲ್ ಅಕ್ಕಿ ಅಗತ್ಯವಿದ್ದು, ಪಡಿತರ ಚೀಟಿದಾರರಿಗೆ ಕುಚ್ಚಲಕ್ಕಿ ವಿತರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.