ಜೈಪುರ: ರಾಜಸ್ಥಾನದ ದೌಸಾ ಜಿಲ್ಲೆಯ ಸದರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ಪೊಲೀಸರ ಪ್ರಕಾರ, ಇಬ್ಬರು ಯುವಕರು 15 ವರ್ಷದ ಅಪ್ರಾಪ್ತಿಯನ್ನು ಅಪಹರಿಸಿದ ನಂತರ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಸಂತ್ರಸ್ತೆಯನ್ನು ನಿರ್ಜನ ಪ್ರದೇಶದಲ್ಲಿ ಎಸೆದು ಆರೋಪಿಗಳು ಪರಾರಿಯಾಗಿದ್ದಾರೆ. ಬುಧವಾರ ರಾತ್ರಿ ದೌಸಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಾಲಕಿ ಪತ್ತೆಯಾಗಿದ್ದಾಳೆ. ಇದಾದ ಬಳಿಕ ಆರೋಪಿಗಳಾದ ಲೋಕೇಶ್ ಹಾಗೂ ಸತೀಶ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತನ್ನ ಶಾಲೆಯ ಸಮೀಪವಿರುವ ಜೆರಾಕ್ಸ್ ಅಂಗಡಿಯಿಂದ ನಕಲು ಪ್ರತಿ ಪಡೆಯಲು ಹೋಗಿದ್ದ ಬಾಲಕಿಯನ್ನು ಆರೋಪಿಗಳು ಅಪಹರಿಸಿದ್ದಾರೆ. ಆರೋಪಿಗಳು ಆಕೆಯನ್ನು ಮೋಟಾರ್ ಸೈಕಲ್ ನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ.
ಸಂಜೆಯಾದರೂ ಬಾಲಕಿ ಮನೆಗೆ ಬಾರದೆ ಇದ್ದಾಗ ಕುಟುಂಬಸ್ಥರು ಹುಡುಕಾಟ ಆರಂಭಿಸಿದ್ದರು. ಆರೋಪಿಗಳು ರಾಷ್ಟ್ರೀಯ ಹೆದ್ದಾರಿಯ ಏಕಾಂತ ಸ್ಥಳದಲ್ಲಿ ಬಾಲಕಿ ಎಸೆದು ಪರಾರಿಯಾಗಿದ್ದಾರೆ. ಸಂತ್ರಸ್ತೆ ಹೇಗೋ ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ನಿಂದ ಆತನ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾಳೆ. ಸಂತ್ರಸ್ತೆಯ ದೂರಿನ ಮೇರೆಗೆ ಬುಧವಾರ ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಬಂಧನಕ್ಕೆ ಕ್ರಮಕೈಗೊಳ್ಳಲಾಗಿದೆ.