ಬೆಂಗಳೂರು: ವಿಧಾನಸೌಧದ ಮೂರನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸಿಬ್ಬಂದಿ ಕೂಡಲೆ ಕಾರ್ಯ ಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿದ್ದಾರೆ.
ಕೊಠಡಿ ಸಂಖ್ಯೆ 334 ರಲ್ಲಿ ಅಳವಡಿಸಿದ್ದ ಎಸಿಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಹೇಳಲಾಗಿದೆ. ನಿನ್ನೆ ರಾತ್ರಿ ಬೆಂಕಿ ಕಾಣಿಸಿಕೊಂಡ ನಂತರ ಸ್ಪೋಟದ ಸದ್ದು ಕೇಳಿದ್ದು, ವಿಧಾನಸೌಧದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಬಂದು ಪರಿಶೀಲಿಸಿ ಬೆಂಕಿಯನ್ನು ನಂದಿಸಿದ್ದಾರೆ. ವಿಧಾನಸೌಧ ಠಾಣೆ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.