ರಾಮನಗರ: ರಾಮನಗರಕ್ಕೂ ನನಗೂ ಅವಿನಾಭಾವ ಸಂಬಂಧವಿದೆ. ಈ ಜಿಲ್ಲೆಯದ್ದು ಹಾಗೂ ನನಗೂ ತಾಯಿ-ಮಗನ ಸಂಬಂಧ. ರಾಮನಗರದಲ್ಲಿ ಅಭ್ಯರ್ಥಿ ನಿಲ್ಲಿಸಲಾಗುವುದು ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.
ರಾಮನಗರದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ ಅವರಿಗೆ, ಹೆಚ್.ಡಿ.ದೇವೇಗೌಡರಿಗೆ ಅವಕಾಶ ನೀಡಿದ್ದೀರಿ. ನೀವೀಗ ನನಗೂ ಒಂದು ಬಾರಿ ಅವಕಾಶ ಕೊಡಿ ಎಂದು ಹೇಳುವ ಮೂಲಕ ಕುಮಾರಸ್ವಾಮಿಯವರಿಗೆ ನೇರ ಸವಾಲು ಹಾಕಿದ್ದಾರೆ.
ನನಗೆ ಯಾವ ಹೂವಿನ ಹಾರವೂ ಬೇಡ. ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿದರೆ ಅದೇ ನನಗೆ ಹೂವಿನ ಹಾರ. ರಾಮನಗರದಲ್ಲಿ ನಮ್ಮ ಅಭ್ಯರ್ಥಿ ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸಿಕೊಡಿ ಎಂದು ಹೇಳಿದ್ದಾರೆ.