ಬೆಂಗಳೂರು: 1ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಪೌಷ್ಠಿಕಾಂಶ ಆಹಾರ ಪೂರೈಕೆ ನಿಟ್ಟಿನಲ್ಲಿ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
2022-23ನೇ ಸಾಲಿನ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ವಿತರಿಸಲು ತೀರ್ಮಾನಿಸಲಾಗಿದ್ದು, ರಾಜ್ಯ ಸರ್ಕಾರ 46 ದಿನಗಳ ಕಾಲ ವಿತರಣೆಗೆ ಸಮ್ಮತಿ ಸೂಚಿಸಿದೆ. ಮೊಟ್ಟೆ ಸೇವಿಸದ ವಿದ್ಯಾರ್ಥಿಗಳಿಗೆ ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಿಸಲಾಗುತ್ತಿದೆ.
ಶಾಲೆಗಳಲ್ಲಿ ಮಕ್ಕಳಿಗೆ ವರ್ಷದ 100 ದಿನ ಬಿಸಿಯೂಟದ ಜತೆಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ವಿತರಣೆಗೆ ಶಿಕ್ಷಣ ಇಲಾಖೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು. ಆದರೆ ಸರ್ಕಾರ 100 ದಿನಗಳ ಬದಲಾಗಿ 46 ದಿನಗಳು ಮಾತ್ರ ವಿತರಿಸಲು ಒಪ್ಪಿಗೆ ನೀಡಿದೆ.