ಬೆಂಗಳೂರು: 3-4 ತಲೆಮಾರಿಗಾಗುವಷ್ಟು ಮಾಡಿಕೊಂಡಿದ್ದೇವೆ ಎಂಬ ಮಾಜಿ ಸ್ಪೀಕರ್, ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ರಮೇಶ್ ಕುಮಾರ್ ಹಣ, ಸಂಪತ್ತು ಎಂಬ ಅರ್ಥದಲ್ಲಿ ಮಾತನಾಡಿಲ್ಲ. ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. 2-3 ತಲೆಮಾರಿಗಾಗುವಷ್ಟು ಶಕ್ತಿಯನ್ನು ಕಾಂಗ್ರೆಸ್ ಹೊಂದಿದೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ಶಕ್ತಿ ಕೊಟ್ಟಿದೆ ಎಂಬುದು ರಮೇಶ್ ಕುಮಾರ್ ಹೇಳಿಕೆ ಅರ್ಥ ಎಂದು ಹೇಳಿದ್ದಾರೆ.
ಸೋನಿಯಾ ಗಾಂಧಿ ಬೆಂಬಲಿಸಿ ಎಂದು ರಮೇಶ್ ಕುಮಾರ್ ಹೇಳಿದ್ದು, ಅದು ಬಿಟ್ಟು ಆಸ್ತಿ ವಿಚಾರವಾಗಿ ರಮೇಶ್ ಮಾತನಾಡಿಲ್ಲ. ರಮೇಶ್ ಕುಮಾರ್ ಹೇಳಿಕೆ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ. ಈ ಬಗ್ಗೆ ಚರ್ಚೆಗೆ ನಾನು ಸಿದ್ಧ ಎಂದು ಹೇಳಿದರು.